ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸ್ಥಾಪನೆಗೊಂಡ ನಂತರ ಇದುವರೆಗೆ ಮಾಡಿರುವ ಸಾಧನೆಗಳು
 1. ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಅನುಷ್ಟಾನದ ಬಗ್ಗೆ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ತಪಾಸಣೆ ಕೈಗೊಂಡಿದೆ ಮತ್ತು ಕನ್ನಡ ಅನುಷ್ಟಾನ ವಿಭಾಗವನ್ನು ತೆರೆಯಲಾಗಿದೆ
 2. ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ.ವರೆಗೆ ಶಿಕ್ಷಣ ಪಡೆದವರಿಗೆ ಸರ್ಕಾರದ ಉದ್ಯೋಗಗಳಲ್ಲಿ ಶೇಕಡಾ 5ರ ಮೀಸಲಾತಿ ನೀಡಲು ಪ್ರಾಧಿಕಾರ ಶಿಫಾರಸ್ಸು ಮಾಡಿದ್ದು ಅದರಂತೆ ಸರಕಾರ ಆದೇಶ ಹೊರಡಿಸಿದೆ
 3. ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ. ವರೆಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಎಲ್ಲ ವೃತ್ತಿಪರ ಶಿಕ್ಷಣದಲ್ಲೂ ಶೇಕಡಾ 5ರ ಮೀಸಲಾತಿ ಸೌಲಭ್ಯವನ್ನು ಒದಗಿಸಲು ಮಾಡಿದ ಶಿಫಾರಸ್ಸಿನಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
 4. ಕನ್ನಡ ಸಂಸ್ಕೃತಿ, ಇತಿಹಾಸ, ಕಲೆ ಮುಂತಾದ ವಿಷಯಗಳ ಬಗ್ಗೆ ತಿಳುವಳಿಕೆ ನೀಡುವ ಸಲುವಾಗಿ ಕನ್ನಡ ಸಂಸ್ಕೃತಿ ಶಿಬಿರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದೆ.
 5. ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ಕನ್ನಡ ಕಲಿಸಲು ಕನ್ನಡ ಕಲಿಕಾ ಯೋಜನೆಯಡಿಯಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ.
 6. ಗಣಕಯಂತ್ರಗಳಲ್ಲಿ ಕನ್ನಡ ಬಳಕೆ ಬಗ್ಗೆ ಕ್ರಿಯಾ ಯೋಜನೆಯಡಿಯಲ್ಲಿ ಕನ್ನಡ ಲಿಪಿ ತಂತ್ರಾಂಶ "ನುಡಿ" ಹೊರತರಲಾಗಿದೆ.
 7. ಶಿಕ್ಷಣ ಮತ್ತು ಮಾಧ್ಯಮ ನೀತಿ ನಿರೂಪಣಾ ವರದಿಯನ್ನು ಸರ್ಕಾರಕ್ಕೆ ನೀಡಲಾಗಿದೆ.
 8. ಕನ್ನಡ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಕರ ಸಾಹಿತ್ಯ ಯೋಜನೆಯಡಿಯಲ್ಲಿ ಉಪಯುಕ್ತ ಪುಸ್ತಕಗಳನ್ನು ಪ್ರಕಟಿಸಲಾಗಿದೆ.
 9. ರಾಜ್ಯ ಮತ್ತು ಹೊರರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯನ್ನು ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಗೌರವಿಸಿ ಪುರಸ್ಕರಿಸಲಾಗುತ್ತಿದೆ.
 10. ಹೊರನಾಡು ವಿಶ್ವವಿದ್ಯಾನಿಲಯಗಳಲ್ಲಿ ಎಂ.ಎ. ಕನ್ನಡ ಪದವಿ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾಗಳಿಗೆ ಉತ್ತೇಜಕ ಬಹುಮಾನಗಳನ್ನು ನೀಡಲಾಗುತ್ತಿದೆ.
 11. ಸರ್ಕಾರದ ಆಡಳಿತದಲ್ಲಿ ಕನ್ನಡವನ್ನು ಬಳಸದ ಅಧಿಕಾರಿ/ನೌಕರರ ವಿರುದ್ಧ ಶಿಸ್ತುಕ್ರಮಕ್ಕಾಗಿ ಶಿಫಾರಸ್ಸುಗಳನ್ನು ಮಾಡಿದ್ದು ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳುತ್ತಿವೆ.
 12. ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ತೀರ್ಪ ನೀಡಿದ ನ್ಯಾಯಮೂರ್ತಿಗಳನ್ನು ಗೌರವಿಸಿ ಪುರಸ್ಕರಿಸಲಾಗುತ್ತಿದೆ.
 13. ಕನ್ನಡೇತರರಿಗೆ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಉದ್ಯಾನವನಗಳಲ್ಲಿ ಕನ್ನಡ ಚಿಂತನೆ, ಕನ್ನಡ ಸಂವಹನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
 14. ಕೇಂದ್ರ ಸರ್ಕಾರ, ಕೇಂದ್ರ ಸ್ವಮ್ಯದ ಉದ್ದಿಮೆಗಳು, ಕಾರ್ಖಾನೆಗಳು, ಬ್ಯಾಂಕ್ ಗಳಲ್ಲಿ ತ್ರಿಭಾಷಾ ಸೂತ್ರ ಅನುಷ್ಠಾನ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿಯ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತಿದೆ.
 15. ಕಾಲೇಜು ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
 16. ಕಾಲೇಜು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಲ್ಲಿ ಕನ್ನಡ ಭಾಷಾ ನೈಪುಣ್ಯತೆಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಕನ್ನಡ ಕಾವ್ಯ ರಸಗ್ರಹಣ ಶಿಬಿರ, ಹಳೆಗನ್ನಡ ಓದು ವ್ಯಾಖ್ಯಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.